ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕಿದೆ. ರಾಜ್ಯದಲ್ಲಿ ಹಲವು ಸಮಸ್ಯೆಗಳಿಗೆ ಇನ್ನೂ ಪರಿಹಾರವೇ ದೊರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಕಬ್ಬು ಬೆಳಗಾರರ ಸಮಸ್ಯೆ ಸಂಪೂರ್ಣ ಬಗೆಹರಿದಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರ ಸರಿಯಾದ ಸಮಯಕ್ಕೆ ಸ್ಥಾಪಿಸದೆ ಸಮಸ್ಯೆ ಆಗಿದೆ. ಈ ಎಲ್ಲಾ ರೈತರ ಸಮಸ್ಯೆ ಚರ್ಚೆ ಆಗಬೇಕಿದೆ ಎಂದಿದ್ದಾರೆ
ಇನ್ನೂ ಆಂತರಿಕ ಕಚ್ಚಾಟದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸುವರ್ಣ ಸೌಧ ಇರೋದು ಹರಿಯಾಣದ ಸಮಸ್ಯೆಗಲ್ಲ ರೈತರ ಸಮಸ್ಯೆ ಬಗೆಹರಿಸಲು ಇವರಿಗೆ ಆಗಿಲ್ಲ. ಕರ್ನಾಟಕ ಸರ್ಕಾರವನ್ನ ATM ಮಾಡಿಕೊಂಡಿದ್ದಾರೆ. ಈ ಎಲ್ಲಾ ವಿಚಾರವನ್ನ ಸದನದಲ್ಲಿ ಚರ್ಚಿಸುತ್ತೇವೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಹಾಸನದಲ್ಲಿ ವಿಭಿನ್ನ ಆಚರಣೆ | ಹರಕೆ ತೀರಿಸಲು ಬೆಂಕಿಯಲ್ಲಿ ಹೊಡೆದಾಡಿಕೊಂಡ ಆಂಜನೇಯನ ಭಕ್ತರು!



















