ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ.
ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದಲ್ಲದೆ ಆನೆಗಳು ಮನುಷ್ಯರ ಮೇಲೂ ದಾಳಿ ಮಾಡುವ ಆತಂಕ ಉಂಟಾಗಿದೆ. ಈ ಹಿನ್ನೆಲೆ ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಬೆಳಗಾವಿ ಅಧಿವೇಶನದಲ್ಲಿ ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ



















