ಬೆಂಗಳೂರು: ದೇಶದಲ್ಲೇ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ (SBI Specialist Officer Recruitment 2025) 996 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್ (SBI)
ಒಟ್ಟು ಹುದ್ದೆ: 996
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 23
20ರಿಂದ 42 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು sbi.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 3.72 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ sbi.bank.in ಗೆ ಭೇಟಿ ನೀಡಬೇಕು.
- ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
‘
ಇದನ್ನೂ ಓದಿ: ಕಚೇರಿಯಿಂದ ಮನೆಗೆ ಬಂದ ಬಳಿಕ ಬಾಸ್ ಕಾಲ್ ಗಳ ಕಿರಿಕಿರಿ ಇರೋದಿಲ್ಲ : ಏನಿದು ಹೊಸ ಬಿಲ್?



















