ಹಾಸನ: ಗಾಂಜಾ ಅಮಲಿನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದು, ಬಳಿಕ ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಘಟನೆ ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ.
ಹೂವಿನಹಳ್ಳಿ ಕಾವಲ್ ಗ್ರಾಮದ ನಿವಾಸಿ ಕೀರ್ತಿ (24) ಕೊಲೆಯಾದ ಯುವಕ. ದೊಡ್ಡಕಣಗಾಲ್ ಗ್ರಾಮದ ವಾಸಿ ಉಲ್ಲಾಸ್ ಕೊಲೆ ಮಾಡಿದ ಯುವಕ. ಗಾಂಜಾ ಮತ್ತಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಅದು ವಿಕೋಪಕ್ಕೆ ಹೋಗಿ ಉಲ್ಲಾಸ್, ಕೀರ್ತಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಾಸನದ ಎಸ್ಪಿ ಶ್ರೀನಿಧಿ ಭೇಟಿ ಪರಿಶೀಲನೆ ಮಾಡಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ



















