ರಾಮನಗರ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಅಶ್ಲೀಲ ಪೋಟೋ ಕಳುಹಿಸಿ ತೊಂದರೆ ನೀಡುತ್ತಿದ್ದ ಆರೋಪಿಯನ್ನು ಪತ್ತೆ ಮಾಡಿ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಶಿವಶಂಕರ್ ಬಂಧಿತ ಆರೋಪಿ. ಫ್ರೆಂಡ್ ಶಿಪ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿಗೆ ವರ್ಕ್ ಫ್ರಂ ಹೋಮ್ ಕೆಲಸ ಕೊಡಿಸುವುದಾಗಿ ನಂಬಿಸಿ, ಯುವತಿಯ ಪೋಟೋ ಪಡೆದು, ಅದನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಯುವತಿ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದಳು.
ಯುವತಿ ನೀಡಿದ್ದ ದೂರಿನ ಅನ್ವಯ ಆರೋಪಿ ಶಿವಶಂಕರ್‌ನನ್ನು ಬಂಧಿಸಲಾಗಿದ್ದು, ಆರೋಪಿಯು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು, ಆ್ಯಪ್ ಮೂಲಕ ಯುವತಿಯ ಸ್ನೇಹ ಬೆಳಸಿ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಮಾತನಾಡಿ, ಯಾರು ಸಹ ಇಂತಹ ಆ್ಯಪ್ ಗಳನ್ನು ನಂಬಿ ನಿಮ್ಮ ದಾಖಲೆಗಳನ್ನು ಕೊಡಬೇಡಿ. ವಯಕ್ತಿಕ ದಾಖಲೆ ನೀಡಿದರೆ ಈ ರೀತಿಯ ಸಮಸ್ಯೆಗಳು ಆಗಲಿವೆ. ಎಲ್ಲ ಯುವತಿಯರು ಎಚ್ಚರಿಕೆಯಿಂದ ಇರಬೇಕು ಎಂದು ಮಾಹಿತಿ ನೀಡಿದ್ದಾರೆ,
ಇದನ್ನೂ ಓದಿ: ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ



















