ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಾದ ನಿಮ್ಹಾನ್ಸ್ ಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಲ್ಯಾಬೊರೇಟರಿ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ನಿಮ್ಹಾನ್ಸ್ ಅಧಿಸೂಚನೆಯಲ್ಲಿ ತಿಳಿಸಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 03
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಮೆಡಿಕಲ್ ಲ್ಯಾಬೊರೇಟರಿ ಟೆಕ್ನಿಶಿಯನ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 15
ಮೆಡಿಕಲ್ ಲ್ಯಾಬೊರೇಟರಿ ಟೆಕ್ನಿಶಿಯನ್, ಜೂನಿಯರ್ ರಿಸರ್ಚ್ ಫೆಲೋ ಹಾಗೂ ಪ್ರಾಜೆಕ್ಟ್ ಕೋ-ಆರ್ಟಿನೇಟ್ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು jpjmbial@gmail.com ಗೆ ಮೇಲ್ ಮಾಡಬೇಕು.
ಇದನ್ನೂ ಓದಿ : ಸರ್ಕಾರಿ ನೌಕರ ನಿಧನರಾದರೆ ಪಿಎಫ್ ಹಣ ಯಾರಿಗೆ ಸೇರಬೇಕು? ಹೊಸ ಆದೇಶ ಇಲ್ಲಿದೆ



















