ಶಿವಮೊಗ್ಗ : ಡೆವಿಲ್ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ನಡೆದಿದೆ.
ಮೀನುಗುಂದ ಗ್ರಾಮದ ಪುನೀತ್ (26) ಮೃತ ದುರ್ದೈವಿ. ಕಳದ ರಾತ್ರಿ ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಪುನೀತ್ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ರಾಜಹಂಸ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಆಸ್ಪತ್ರೆಗೆ ತೆರಳುವಷ್ಟರಲ್ಲಿ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರೀಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ‘ಡೆವಿಲ್’ ದರ್ಬಾರ್ | ಅಭಿಮಾನಿಗಳಿಂದ ವಿವಿಧ ಜನಸೇವೆ!



















