ಯಾದಗಿರಿ: ವಿಷಪೂರಿತ ಆಹಾರ ಸೇವಿಸಿ 30ಕ್ಕೂ ಅಧಿಕ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ.
ನಿನ್ನೆ ಬುಧವಾರ ರಾತ್ರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಚಿಕನ್, ಚಪಾತಿ ಊಟ ಮಾಡಿದ ಬಳಿಕ, 30ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಗುರುಮಠಕಲ್ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಡಿಸಿ ಹರ್ಷಲ್ ಬೋಯರ್, ಸಿಇಓ ಲವೀಶ್ ಓರಡಿಯಾ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: ಉಡುಪಿ : ಅದ್ಧೂರಿಯಾಗಿ ಐತಿಹಾಸಿಕ ತಗ್ಗರ್ಸೆ ಕಂಬಳೋತ್ಸವ ಸಂಪನ್ನ



















