ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ವಿವರವಾಗಿ ಚರ್ಚಿಸಿದರು.
ಈ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೊಲ್ಲೂರು ಕಾರಿಡಾರ್ ಅಭಿವೃದ್ಧಿ ಯೋಜನೆ ಹಾಗೂ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತ್ಯುನ್ನತ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ಹಣಕಾಸು ಸಹಾಯ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ನೆರವು ಒದಗಿಸಬೇಕೆಂದು ವಿನಂತಿಸಿದರು.
ಎಲ್ಲಾ ಬೇಡಿಕೆಗಳನ್ನು ಗಮನದಿಂದ ಆಲಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಗತ್ಯ ಸಹಕಾರದ ಭರವಸೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ‘ಕೊನೆಗೂ ನಾವು ಗೆದ್ವಿ’ | ದರ್ಶನ್ ‘ದಿ ಡೆವಿಲ್’ ಚಿತ್ರಕ್ಕೆ ಪ್ರೇಕ್ಷಕರು ಕೊಟ್ಟ ವಿಮರ್ಶೆಗಳು ಇಲ್ಲಿದೆ ನೋಡಿ!



















