ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO Recruitment 2025) ಖಾಲಿ ಇರುವ 764 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO)
ಹುದ್ದೆ ಹೆಸರು: ಟೆಕ್ನಿಶಿಯನ್ ಇತ್ಯಾದಿ
ಒಟ್ಟು ಹುದ್ದೆ: 764
ಉದ್ಯೋಗ ಸ್ಥಳ: ದೇಶಾದ್ಯಂತ
ಸಂದರ್ಶನದ ದಿನಾಂಕ: ಡಿಸೆಂಬರ್ 31
561 ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್-ಬಿ ಹಾಗೂ 203 ಟೆಕ್ನಿಶಿಯನ್ ಎ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಕನಿಷ್ಠ 18ರಿಂದ ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://drdo.gov.in/drdo/ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಬೇಕು - ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು
ಇದನ್ನೂ ಓದಿ: ಕೇಂದ್ರೀಯ ಮಾಧ್ಯಮ ಶಿಕ್ಷಣ ಮಂಡಳಿಯಲ್ಲಿ 124 ಹುದ್ದೆ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್



















