ಚಂಡೀಗಢ : ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ20ಐ ಪಂದ್ಯ ನಡೆಯುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಏಡೆನ್ ಮಾರ್ಕ್ರಮ್ ನಾಯಕತ್ವದ ಎದುರಾಳಿ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್ ಮಾಡಲು ಆತಿಥೇಯ ತಂಡ ಯೋಜನೆ ರೂಪಿಸಿದೆ.
ಕಟನ್‌ನಲ್ಲಿ ಮೊದಲನೇ ಟಿ20ಐ ಪಂದ್ಯವನ್ನು ಗೆದ್ದಿದ್ದ ಭಾರತ ತಂಡ, ಎರಡನೇ ಪಂದ್ಯಕ್ಕೆ ತನ್ನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆರಂಭಿಕ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ.
ಆದರೆ, ದಕ್ಷಿಣ ಆಫ್ರಿಕಾ ತಂಡದ ಪ್ಲೇಯಿಂಗ್ xiನಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಟ್ರಿಸ್ಟನ್ ಸ್ಟಬ್ಸ್, ಕೇಶವ್ ಮಹಾರಾಜ್ ಹಾಗೂ ಎನ್ರಿಕ್ ಅವರ ಬದಲು ರೀಝಾ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ ಹಾಗೂ ಒಟ್ನಿಲ್ ಬಾರ್ಟಮನ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಭಾರತದ ಜಲಗಡಿ ಪ್ರವೇಶಿಸಿದ ಪಾಕ್ ಬೋಟ್ ವಶಕ್ಕೆ | 11 ಮಂದಿ ಬಂಧನ!



















