ಆನೇಕಲ್ : ಅಡ್ಡ ಬಂದ ಸೈಕಲ್ ಸವಾರನ ತಪ್ಪಿಸಲು ಹೋಗಿ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಆನೇಕಲ್-ಚಂದಾಪುರ ಮುಖ್ಯರಸ್ತೆಯ ಆವಡದೇನಹಳ್ಳಿ ಗೇಟ್ ಬಳಿ ನಡೆದಿದೆ.
ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಅಬ್ದುಲ್ ಸತ್ತಾರ್(26) ಮೃತ ಬೈಕ್ ಸವಾರನಾಗಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ, ಅದಾಗಲೇ ಅವರು ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭಿಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : ಇಂಡಿಗೋ ವಿಮಾನ ರದ್ದಿನಿಂದ ತೊಂದರೆ ಅನುಭವಿಸಿದ ಪ್ರಯಾಣಿಕರಿಗೆ ಗಿಫ್ಟ್ | 10 ಸಾವಿರ ರೂ.ಗಳ ವೋಚರ್ ಪರಿಹಾರ ಘೋಷಣೆ!



















