ಬೆಂಗಳೂರು: ಕೋಲಾರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Kolar Recruitment 2025) ಖಾಲಿ ಇರುವ 31 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 31 ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ: 31
ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 16
ಅನಸ್ತೇಷಿಯಾಲಜಿಸ್ಟ್, ಗೈನಕಲಾಜಿಸ್ಟ್, ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಪದವಿ, ಬಿಎಸ್ಸಿ, ಎಂಬಿಬಿಎಸ್, ಎಂಡಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.10 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kolar.nic.inಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ District Health and Family Welfare Officer’s Office, Kolar ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ; 2026ರಲ್ಲಿ ನಿಮ್ಮ ಕೈತುಂಬ ಹಣ ಇರಬೇಕಾ? ಮೊದಲು ಈ Resolutions ನಿಮ್ಮದಾಗಲಿ



















