ಬೆಂಗಳೂರು : ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿದಿರುವ ಘಟನೆ ವಿಜಯನನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಏಕಾಏಕಿ ಕಾರು ಬೆಂಕಿ ಹೊತ್ತಿ ಧಗಧಗನೆ ಉರಿದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ. ಘಟನೆಯಿಂದ ಸಂಪೂರ್ಣವಾಗಿ ಕಾರು ಸುಟ್ಟು ಕರಕಲಾಗಿದೆ.
ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿ ನೊಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದುವರೆಗೂ ಯಾವುದೇ ಪ್ರಾಣಾಪಾಯ ಆಗಿರುವ ಮಾಹಿತಿ ಇಲ್ಲ. ಸದ್ಯ ವಿಜಯನಗರ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಅಧಿವೇಶನವನ್ನು ಒಂದು ವಾರ ವಿಸ್ತರಿಸಿ | ಸ್ಪೀಕರ್ ಖಾದರ್‌ಗೆ ಆರ್.ಅಶೋಕ್ ಪತ್ರ



















