ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬಿಕಾಂ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ವಿದ್ಯಾರ್ಥಿನಿ ದಿಶಾ ಅವರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಕಾಲೇಜು ಸಹಪಾಠಿಗಳು, ಶಿಕ್ಷಕರು ಮತ್ತು ಕುಟುಂಬದಲ್ಲಿ ತೀವ್ರ ದುಃಖವನ್ನು ತಂದೊಡ್ಡಿದೆ.
ಮೃತ ವಿದ್ಯಾರ್ಥಿನಿಯನ್ನ ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು.
ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಡಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ : ಡಿಸೆಂಬರ್ 27ಕ್ಕೆ ಯೋಗಿ ಆದಿತ್ಯನಾಥ್ ಉಡುಪಿ ಭೇಟಿ ಸಾಧ್ಯತೆ



















