ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2025) ಖಾಲಿ ಇರುವ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 03
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ
The Deputy General Manager (HR), HR Department, Foundry & Forge Division, Bangalore Complex, Hindustan Aeronautics Limited, Post Bag No.1791, Vimanapura Post, Bangalore-560017.
ಇದನ್ನೂ ಓದಿ : ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 44 ಹುದ್ದೆಗಳ ನೇಮಕ: 1.2 ಲಕ್ಷ ರೂ. ಸಂಬಳ



















