ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ (UCSL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕಮಿಷನಿಂಗ್ ಎಂಜಿನಿಯರ್ ಹಾಗೂ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರಿ ಹುದ್ದೆಗಳನ್ನು ಹುಡುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಕಮಿಷನಿಂಗ್ ಎಂಜಿನಿಯರ್ ಹಾಗೂ ಅಸಿಸ್ಟಂಟ್
ಒಟ್ಟು ಹುದ್ದೆಗಳು: 13
ಉದ್ಯೋಗ ಸ್ಥಳ: ಉಡುಪಿ
ನೇರ ಸಂದರ್ಶನದ ದಿನಾಂಕ: ಜನವರಿ 6
ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ವಿಭಾಗದಲ್ಲಿ 3 ಕಮಿಷನಿಂಗ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಹಾಗೆಯೇ, 10 ಕಮಿಷನಿಂಗ್ ಅಸಿಸ್ಟಂಟ್ ಹುದ್ದೆಗಳನ್ನು ಕೂಡ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ udupicsl.com ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಬಳಿಕ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
Recreation Club, Cochin Shipyard Limited, Tavera Gate, Kochi – 682015
ಇದನ್ನೂ ಓದಿ : 5 ವರ್ಷಗಳ ಹೂಡಿಕೆಗೆ 2.21 ಲಕ್ಷ ರೂ. ಲಾಭ : ಹೇಗೆ ಅಂತೀರಾ? ಇಲ್ಲಿದೆ ಮಾಹಿತಿ



















