ಲಕ್ನೋ | ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ನಡೆಯಲಿದೆ. ಎರಡೂ ತಂಡಗಳು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಭಾರತ ಈಗಾಗಲೇ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಇಂದಿನ ಪಂದ್ಯ ಗೆದ್ದು ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ವಶಪಡಿಸಿಕೊಳ್ಳುವ ಯೋಜನೆ ರೂಪಿಸಿಕೊಂಡಿದೆ. ಮತ್ತೊಂದೆಡೆ ಸಫಾರಿ ಸೈನ್ಯ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಕನಸು ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ.
ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯೂ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಜಿಯೋ ಹಾಟ್‌ಸ್ಟಾರ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದ್ದು ಫ್ಯಾನ್ಸ್ ಪಂದ್ಯವನ್ನು ವೀಕ್ಷಿಸಬಹುದು. ಪಂದ್ಯವೂ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.
ನಾಲ್ಕನೇ ಪಂದ್ಯಕ್ಕೆ ಸಂಭಾವ್ಯ ತಂಡ ಹೀಗಿದೆ
ಭಾರತ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ/ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಚಕ್ರವರ್ , ಮತ್ತು ವರ್ತಿ ಬುಮ್ರಾ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೂಯಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಜಾರ್ಜ್ ಲಿಂಡೆ, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಅನ್ರಿಚ್ ನಾರ್ಟ್ಜೆ ಮತ್ತು ಒಟ್ನೀಲ್ ಬಾರ್ಟ್‌ಮನ್.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಕಿಚ್ಚನ ‘ಮಾರ್ಕ್’ ಬಾಂಬ್!



















