ಮಡಿಕೇರಿ : ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವನನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ತಲೆ ಮರೆಸಿಕೊಂಡಿರುವ ಉಳಿದ ಐವರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಆರೋಪಿಗಳು ಸೋವವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನ ಕಡಿದಿದ್ದರು. ಬಳಿಕ ಅವುಗಳನ್ನ ನಾಟಗಳಾನ್ನಾಗಿ ಪರಿವರ್ತಿಸಿ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದರು. ಇದೇ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ ಆರೋಪಿಗಳು ಅರಣ್ಯಾಧಿಕಾರಿಗಳ ಮೇಲೆಯೇ ಪ್ರತಿದಾಳಿಗೆ ಯತ್ನಿಸಿದ್ದರು. ನಂತರ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ರು. ಬಳಿಕ ಎಡವಾರೆ ಗ್ರಾಮದ ಓರ್ವ ಆರೋಪಿಯನ್ನ ಸ್ಥಳದಲ್ಲೇ ಬಂಧಿಸಿ ತೇಗದ ನಾಟಗಳನ್ನ ವಶಪಡಿಸಿಕೊಂಡಿದ್ದಾರೆ. ಇನ್ನೂ ಘಟನಾ ಸ್ಥಳದಿಂದ ಎಸ್ಕೇಪ್ ಆದವರ ಬಂಧನಕ್ಕೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ನಾಳೆ ಭಾರತ-ಆಫ್ರಿಕಾ ನಡುವೆ ಸರಣಿ ನಿರ್ಧಾರಕ ಪಂದ್ಯ | ಹೇಗಿರಲಿದೆ ಟೀಂ ಇಂಡಿಯಾ ಪ್ಲೇಯಿಂಗ್ 11?



















