ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ (KSRSS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಪುರುಷ ನರ್ಸ್, ಮಹಿಳಾ ವಾರ್ಡನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ
ಒಟ್ಟು ಹುದ್ದೆಗಳು: 04
ಹುದ್ದೆಗಳ ಹೆಸರು: ಪುರುಷ ನರ್ಸ್, ಮಹಿಳಾ ವಾರ್ಡನ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 26
ಒಂದು ಪುರುಷ ನರ್ಸ್, ಒಂದು ಮಹಿಳಾ ವಾರ್ಡನ್ ಹಾಗೂ ಎರಡು ಕ್ಲರ್ಕ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18 ಸಾವಿರ ರೂ.ನಿಂದ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಜನರಲ್, ಒಬಿಸಿ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 350 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಳಗಾವಿಯ ಸಂಗೊಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ksrss.com ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ಗ್ರಾಮ, ಬೈಲಹೊಂಗಲ ತಾಲೂಕು, ಬೆಳಗಾವಿ ಜಿಲ್ಲೆ. ಪಿನ್ ಕೋಡ್ -591115
ಇದನ್ನೂ ಓದಿ: ಬೆಂಗಳೂರಿನ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















