ಬೆಳಗಾವಿ : ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.

ಮಂಜುನಾಥ್ ಬೈರ್ನಟ್ಟಿ ಅಪಘಾತದಲ್ಲಿ ಮೃತಪಟ್ಟಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಮಂಜುನಾಥ್ ಬೈರ್ನಟ್ಟಿ ಮೃತಪಟ್ಟಿದ್ದು, ಡಿಸಿಎಂ ಖಾಸಗಿ ಪಿಎ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದೆ. ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡ ರಾಜೇಂದ್ರ ಪ್ರಸಾದ್ ಅವರ ಆರೋಗ್ಯವನ್ನ ಡಿಸಿಎಂ ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ರಾಜೇಂದ್ರ ಪ್ರಸಾದ್ ಹಾಗೂ ಚಾಲಕನ ಆರೋಗ್ಯವನ್ನ ವಿಚಾರಿಸಿ, ಅಪಘಾತದಲ್ಲಿ ಮೃತ ಪಟ್ಟ ಯುವಕನ ಕುಟಂಬಸ್ಥರನ್ನ ಭೇಟಿಯಾಗಿ, ಸಾಂತ್ವನ ತಿಳಿಸುತ್ತೇನೆ ಅಂತ ಹೇಳಿದ್ದಾರೆ.
ಇದನ್ನೂ ಓದಿ : ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ | NASCAR ಚಾಲಕ ಗ್ರೆಗ್ ಕುಟುಂಬ ಸೇರಿ 7 ಮಂದಿ ಸಜೀವ ದಹನ



















