ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದೆ. ವಿಜಯಪುರದಲ್ಲಿ ಶುಕ್ರವಾರದಂದು ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ 6.9 ಡಿಗ್ರಿ ಸೆ. ದಾಖಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ಇಂದು ಕೂಡ ಶೀತ ಗಾಳಿ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿ ನಾಳೆಯೂ (ಡಿ.21) ತೀವ್ರ ಶೀತ ಗಾಳಿ ಮುಂದುವರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ.
ಹಾಗೆಯೇ ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ. ಇನ್ನು ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ.
ಹೇಗಿರಲಿದೆ ಬೆಂಗಳೂರು ವಾತಾವರಣ?
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 14°C ಇರುವ ಸಾಧ್ಯತೆ ಇದೆ.
ಇದನ್ನೂ ಓದಿ : ಚಾ.ನಗರದಲ್ಲಿ ಒಂದಲ್ಲ, ಎರಡಲ್ಲ ಒಟ್ಟಿಗೆ 5 ಹುಲಿ ಪ್ರತ್ಯಕ್ಷ.. ಬೆಚ್ಚಿಬಿದ್ದ ಗ್ರಾಮಸ್ಥರು!


















