ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ (DYES Karnataka Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. 13 ಫಿಟ್ ನೆಸ್ ಟ್ರೇನರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ
ಖಾಲಿ ಇರುವ ಹುದ್ದೆಗಳು: 13
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 5
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ dyes.karnataka.gov.in ಗೆ ಭೇಟಿ ನೀಡಬೇಕು
DYES Karnataka ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಸಲ್ಲಿಸಿದ ಅರ್ಜಿಯನ್ನು ಡೌನ್ ಲೋಡ್ ಮಾಡಬೇಕು.
ಡೌನ್ ಲೋಡ್ ಮಾಡಲಾದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Director General, Karnataka Sports Authority, State Youth Centre, Nrupatunga Road, Bengaluru-560001, Karnataka.
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ



















