ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಮುಂದುವರಿಸಿದೆ.
ಇನ್ನೂ ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೇಸ್ ಒಂದರ ವಿಚಾರವಾಗಿ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ನಿನ್ನೆ ರಾತ್ರಿ ಟ್ರ್ಯಾಪ್ ಮಾಡಿ ಬಂಧಿಸಲಾಗಿದೆ. ಲೋಕಾಯುಕ್ತರು ಹಣ ಪಡೆಯುವಾಗಲೇ ಶಿವಣ್ಣನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕ ಲೋಕಾ ಬಲೆಗೆ
ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ನರಗುಂದದ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಇದೇ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆಯ ಮೇಲೆಯೂ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ : 1.12 ಲಕ್ಷ ರೂ. ಸ್ಯಾಲರಿ



















