ಬೆಂಗಳೂರು : ಸಂಬಂಧಿಕರ ಕಾರ್ಯಕ್ರಮಗಳಿಗೆ ಹೋಗಿ ಚೌಟ್ರಿಯಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ರೇವತಿ ಬಂಧಿತ ಆರೋಪಿ. ಬಂಧಿತ ಮಹಿಳೆಯಿಂದ 262ಗ್ರಾಂ ಬಂಗಾರವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖೆ ವೇಳೆ ಮೂರು ಕಳ್ಳತನದಲ್ಲಿ ಮಹಿಳೆ ಭಾಗಿಯಾಗಿರುವುದು ಪತ್ತೆಯಾಗಿದೆ. ಅಲ್ಲದೇ ಉಡುಪಿ,ಶಿವಮೊಗ್ಗ,ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಕಳ್ಳತನ ಮಾಡಿದ್ದಾಳೆ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನವನ್ನು ವಶ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ : ಸೈಬರ್ ವಂಚನೆ : ಹೆಚ್ಚಿನ ಲಾಭದಾಸೆಗೆ ಬಿದ್ದು 76 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!



















