ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 22 ಹುದ್ದೆಗಳ ನೇಮಕಾತಿಗಾಗಿ (EIL Recruitment 2025) ಅಧಿಸೂಚನೆ ಹೊರಡಿಸಲಾಗಿದೆ. 22 ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆ: 22
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 2
ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಿಇ, ಬಿಎಸ್ಸಿ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು 44 ವರ್ಷ ಎಂದು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ನೇಮಕಾತಿ ಹೊಂದಿದ ಮಾಸಿಕ 70 ಸಾವಿರ ರೂಪಾಯಿಯಿಂದ 2.6 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು eil.co.in. ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ : 1 ಲಕ್ಷ ರೂ. ಸಂಬಳ


















