ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2025) ಖಾಲಿ ಇರುವ 29 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಕ್ಸ್ ಸರ್ವಿಸ್ ಮೆನ್, ಆಪರೇಟರ್, ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಎಕ್ಸ್ ಸರ್ವಿಸ್ ಮೆನ್, ಆಪರೇಟರ್, ಸ್ಟಾಫ್ ನರ್ಸ್
ಒಟ್ಟು ಹುದ್ದೆ: 29
ಉದ್ಯೋಗ ಸ್ಥಳ: ಬೆಂಗಳೂರು, ತುಮಕೂರು ಸೇರಿ ದೇಶದ ವಿವಿಧೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 23 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಒದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಕೌಂಟೆಂಟ್ ಹುದ್ದೆ ನೇಮಕ | ಇಂದೇ ಅರ್ಜಿ ಸಲ್ಲಿಸಿ



















