ಬೆಂಗಳೂರು: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಾಟರ್ ಆ್ಯಂಡ್ ಪವರ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (WAPCOS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ವಾಟರ್ ಆ್ಯಂಡ್ ಪವರ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (WAPCOS)
ಹುದ್ದೆ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ಹರಿಯಾಣ, ನವದೆಹಲಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 06
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಎಂಬಿಎ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಗರಿಷ್ಠ 56 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿವರಿಗೆ ಮಾಸಿಕ 1,00,000 – 2,60,000 ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ wapcos.co.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
General Manager (HR) WAPCOS LIMITED, 76-C, Institutional Area, Sector-18, Gurugram-1220
ಇದನ್ನೂ ಓದಿ : ಸಾಲಗಾರರಿಗೆ ಮತ್ತೊಂದು ಸಿಹಿ ಸುದ್ದಿ | ಜನವರಿ 1ರಿಂದ ಈ ಶುಲ್ಕಗಳು ಇರೋದಿಲ್ಲ



















