ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಹೈವೇಸ್ ಆ್ಯಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ (NHIDCL Recruitment 2026) ಖಾಲಿ ಇರುವ 64 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 64 ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈವೇಸ್ ಆ್ಯಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (NHIDCL)
ಹುದ್ದೆ ಹೆಸರು: ಅಸೋಸಿಯೇಟ್
ಒಟ್ಟು ಹುದ್ದೆ: 64
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 12
ಅಸ್ಸಾಂ, ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆಯಾದ ಬಳಿಕ ಸಂದರ್ಶನಕ್ಕೆ ಕರೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ nhidcl.com ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಕರ್ನಾಟಕ ಹೈಕೋರ್ಟಿನಲ್ಲಿ ಲಾ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ



















