ಬೆಂಗಳೂರು: ನೀವು ಈಗಷ್ಟೇ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯುವ ಮೂಲಕ ವೃತ್ತಿ ಆರಂಭಿಸಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ 31 ಹುದ್ದೆಗಳ ನೇಮಕಾತಿಗಾಗಿ (NMPT Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 31
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 29
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಬಿಎ, ಬಿ.ಕಾಂ, ಬಿಇ, ಬಿ ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 9 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಂಗಳೂರು, ಉಡುಪಿ ಭಾಗದವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ newmangaloreport.gov.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ Secretary, Administration Department, NMP, Panambur – 575010 ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ : ಟಿವಿಎಸ್ ಅಪಾಚೆ RTX 300 : ಈ ಅಡ್ವೆಂಚರ್ ಬೈಕ್ ಖರೀದಿಸುವ ಮುನ್ನ ತಿಳಿಯಲೇಬೇಕಾದ ಪ್ಲಸ್ ಮತ್ತು ಮೈನಸ್ ಅಂಶಗಳು



















