ಮೈಸೂರು | ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು.
ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಂಜುಳಾ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ನಿನ್ನೆ ಸಿಲಿಂಡರ್ ಸ್ಪೋಟದಿಂದ ನಾಲ್ವರಿಗೆ ಗಾಯಗಳಾಗಿದ್ದವು. ಬೆಂಗಳೂರು ಮೂಲದ ಲಕ್ಷ್ಮಿ ತಲೆಗೆ ಗಂಭೀರ ಗಾಯವಾಗಿದ್ದರೆ, ಕೊಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ ಕಾಲಿಗೆ ಗಾಯವಾಗಿದೆ. ಹಾಗೇ ರಾಣೆಬೆನ್ನೂರು ಮೂಲದ ಕೊಟ್ಟ್ರೇಶಿ ಕಾಲಿಗೆ ಗಾಯವಾಗಿದ್ದು, ಸದ್ಯ ಗಾಯಾಳುಗಳಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ : ಕುರ್ಚಿ ಸಂಘರ್ಷದ ಮಧ್ಯೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ



















