ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್‌ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಬೆಂಕಿ ಹಚ್ಚಿದ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಧಿಕೃತ ದಾಖಲೆಗಳ ಪ್ರಕಾರ, 22 ವರ್ಷದ ಮನೋಜ್ ಸಾಯಿ ಲೆಲ್ಲಾ ಎಂಬ ವಿದ್ಯಾರ್ಥಿ ಅಮೆರಿಕದ ಡಲ್ಲಾಸ್‌ನ ಯುನಿವರ್ಸಿಟಿ ಆಫ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಫ್ರಿಸ್ಕೋ ನಗರದ ಪೊಲೀಸರು ಆತರನ್ನು ಬಂಧಿಸಿದೆ.
ಪೊಲೀಸರು ನೀಡಿದ ಮಾಹಿತಿಯಂತೆ, ಲೆಲ್ಲಾ ಅವರ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದು, ಯುವಕ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳನ್ನು ತೋರಿಸುತ್ತಿದ್ದು, ಕುಟುಂಬದ ಸದಸ್ಯರ ಜೀವಕ್ಕೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿಸಿದ್ದಾರೆ. ತನಿಖೆ ವೇಳೆ, ಬಂಧನಕ್ಕೂ ಕೆಲವು ದಿನಗಳ ಮುನ್ನ ಯುವಕ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಶಂಕೆಯೂ ವ್ಯಕ್ತವಾಗಿದೆ.
ಷರತ್ತುಬದ್ಧ ಜಾಮೀನು
ಮನೋಜ್ ಲೆಲ್ಲಾ ವಿರುದ್ಧ ಮನೆ ಅಥವಾ ಧಾರ್ಮಿಕ ಸ್ಥಳಕ್ಕೆ ಹಾನಿ ಮಾಡುವ ಉದ್ದೇಶದಿಂದ ಬೆಂಕಿ ಹಚ್ಚಲು ಪ್ರಯತ್ನಿಸಿದ ಆರೋಪ ಹಾಗೂ ಕುಟುಂಬ ಸದಸ್ಯರ ಮೇಲೆ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು, ಈ ಘಟನೆ ಧಾರ್ಮಿಕ ಕೇಂದ್ರಗಳ ವಿರುದ್ಧದ ದಾಳಿ ಎಂದು ಸೂಚಿಸುವ ಯಾವುದೇ ಸಾಕ್ಷಿ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನ್ಯಾಯಾಲಯದ ದಾಖಲೆಗಳ ಪ್ರಕಾರ, ಲೆಲ್ಲಾ ಅವರಿಗೆ ಬೆಂಕಿ ಹಚ್ಚಿದ ಆರೋಪಕ್ಕೆ 1,00,000 ಡಾಲರ್ ಹಾಗೂ ಭಯೋತ್ಪಾದಕ ಬೆದರಿಕೆ ಪ್ರಕರಣಕ್ಕೆ 3,500 ಡಾಲರ್ ಬಾಂಡ್ ನೀಡುವಂತೆ ಸೂಚಿಸಲಾಗಿದೆ.
ಪೊಲೀಸ್ ಇಲಾಖೆಯು ಸದ್ಯದಲ್ಲೇ ಮನೋಜ್ ಲೆಲ್ಲಾ ವಿರುದ್ಧ ದಾಖಲೆ ಮತ್ತು ವೈದ್ಯಕೀಯ ವರದಿಗಳನ್ನು ಕೋರ್ಟ್‌ಗೆ ಸಲ್ಲಿಸುವ ಸಾಧ್ಯತೆಯಿದೆ. ತನಿಖೆ ಮುಂದುವರಿದಿದ್ದು, ಅಧಿಕಾರಿಗಳು ಪ್ರಕರಣದ ವಾಸ್ತವಾಂಶದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ಇದನ್ನೂ ಓದಿ : ಬಿಎಂಸಿ ಚುನಾವಣೆ : ಬಿಜೆಪಿ-ಶಿವಸೇನೆ ಮೈತ್ರಿ ಅಂತಿಮ, 200 ವಾರ್ಡ್‌ಗಳ ಹಂಚಿಕೆ ಪೂರ್ಣ?



















