ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಜಿಲ್ಲೆಯಲ್ಲಿ ದಿನೇ ದಿನೆ ಚಿರತೆ ಕಾಟ ಹೆಚ್ಚಾಗುತ್ತಿದೆ. ಜಿಲ್ಲೆಯ ರಂಗೇನಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆಯಾದ ಬೆನ್ನಲ್ಲೇ ಮತ್ತೊಂದು ಕಡೆ ಚಿರತೆ ಉಲ್ಬಣಗೊಂಡಿದೆ. ಮನೆ ಮುಂದೆ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದಿರುವ ಘಟನೆ ತರೀಕೆರೆ ತಾಲೂಕಿನ ಎ ರಂಗಾಪುರ ಗ್ರಾಮದಲ್ಲಿ ನಡೆದಿದೆ.
ತರೀಕೆರೆ ಪುರಸಭೆ ಸದಸ್ಯ ಬಸವರಾಜ್ ಮನೆಯ ಬಳಿ ನಾಯಿಯನ್ನು ಹೊತ್ತೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಾರೀ ಆತಂಕಕ್ಕೊಳಗಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಅರನ್ಯಾ ಇಲಾಖೆಗೆ ಒತ್ತಾಯುಸುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು | ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಲಾಕ್



















