ಬೆಂಗಳೂರು: ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ (NHAI Recruitment 2026) ಇರುವ 30 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಒಟ್ಟು ಹುದ್ದೆಗಳು: 30
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಹುದ್ದೆಗಳ ಹೆಸರು: ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 21
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೆಕ್ನಿಕಲ್ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಪದವಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು nhai.gov.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ
DGM (HR/Admn-III A, National Highways Authority Of India Plot No.G5-&6, Sector-10, Dwarka, New Delhi-110075
ಇದನ್ನೂ ಓದಿ : ಮನ್ ಕಿ ಬಾತ್‌ನಲ್ಲಿ ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಸಂದೇಶ ಸಾರಿದ ಮೋದಿ



















