ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ.
ಬೈಕ್‌ಗಳಲ್ಲಿ ಬಂದಿದ್ದ ಈ ಐದಕ್ಕೂ ಹೆಚ್ಚು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ.
ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಹಿಳೆ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕಳ್ಳತನ | ಆರೋಪಿಗಳ ಬಂಧನ



















