ಹಾವೇರಿ : ಕಾಟಾವು ಮಾಡಿ ರಾಶಿ ಹಾಕಿದ್ದ ಮೆಕ್ಕೆಜೋಳ ಬೆಳೆಗೆ ಬೆಂಕಿ ತಗುಲಿ, ಲಕ್ಷಾಂತರ ರೂ ಮೌಲ್ಯದ ಮೆಕ್ಕೆಜೋಳ ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಹೊರವಲಯದ ಶಾಂತಿನಗರದಲ್ಲಿ ನಡೆದಿದೆ.
ರೈತ ಗುಡ್ಡಪ್ಪ ಎಂಬುವವರಿಗೆ ಸೇರಿದ್ದ ಮೆಕ್ಕೆಜೋಳ. ಕಟಾವು ಮಾಡಿ ಒಣಗಲು ಒಂದೆಡೆ ರಾಶಿ ಹಾಕಿದ್ದನು. ಕಿಡಿಗೇಡಿಗಳ ಸಿಗರೇಟ್ ಕಿಡಿಯಿಂದ ಬೆಂಕಿ ತಗಲಿರೋ ಶಂಕೆ ವ್ಯಕ್ತವಾಗಿದೆ. ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಹಾನಿಗೊಳಗಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹಾವೇರಿ ಶಹರಾ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ | ಬೆಚ್ಚಿಬಿದ್ದ ಸ್ಥಳೀಯರು



















