ವಿಶಾಖಪಟ್ಟಣಂ : ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಯಲಮಂಚಿಲಿ ಎಂಬಲ್ಲಿ ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳಿಗೆ ಬೆಳಗಿನ ಜಾವ 12:45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ವೃದ್ಧ ಪ್ರಯಾಣಿಕರೊಬ್ಬರು ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ.
ಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ರೈಲಿಗೆ ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು. ಬಿ1 ಬೋಗಿಯಲ್ಲಿ ವೃದ್ಧ ಪ್ರಯಾಣಿಕನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಬೆಂಕಿ ನಂದಿಸಿದ ನಂತರ ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ನಂತರ ರೈಲು ಎರ್ನಾಕುಲಂ ಕಡೆಗೆ ತೆರಳಿದೆ. ಹಾನಿಗೊಳಗಾದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಿದ್ದು, ಬೆಂಕಿ ಅನಾಹುತಕ್ಕೆ ಕಾರಣ ಕಂಡುಹಿಡಿಯಲು ಎರಡು ವಿಧಿವಿಜ್ಞಾನ ತಂಡಗಳು ಕೆಲಸ ಮಾಡುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಗಾಡಿ ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲೇ ಚಾಲಕರ ಕಿತ್ತಾಟ



















