ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಸಿಗರೆಟ್ ವಿಚಾರವಾಗಿ ಎರಡು ಟೀಮ್‌ಗಳ ನಡುವೆ ಗಲಾಟೆ ನಡೆದಿದ್ದು, ಓರ್ವನಿಗೆ ಚಾಕು ಇರಿದಿರುವ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ಅಕ್ಷಯ್ ಬಾರ್‌ನಲ್ಲಿ ನಡೆದಿದೆ.
ಮುಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್‌ಗೆ ಚಾಕು ಇರಿತ. ಲಿಖಿತ್ ಚಾಕು ಇರಿದ ವ್ಯಕ್ತಿ. ಸಿಗರೆಟ್ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಯುವಕನ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿ, ಬಾರ್‌ನಿಂದ ಎಸ್ಕೇಪ್ ಆಗಿದ್ದಾನೆ. ಈ ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್‌ನನ್ನು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಚಾಕು ಇರಿದ ಲಿಖಿತ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಲಾರಿ-ಕಾರು ನಡುವೆ ಭೀಕರ ಅಪಘಾತ | ಪಾದಚಾರಿ ಮೇಲೆ ಪಲ್ಟಿಯಾಗಿ ಬಿದ್ದ ಲಾರಿ.. ಸ್ಥಿತಿ ಗಂಭೀರ



















