ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಯರಮರಸ್ ಬಳಿಯ ಐಬಿಯಲ್ಲಿ ನಡೆದಿದೆ.
ಜಗದೀಶ (26) ಮೃತ ದುರ್ದೈವಿ. ಸರ್ಕಿಟ್ ಹೌಸ್‌ನಲ್ಲಿ ಕೀಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರಿಂದ ಉದ್ಯಾನವನಕ್ಕೆ ನೀರು ಹೊಡೆಯುತ್ತಿದ್ದ ವೇಳೆ ವಿದ್ಯುತ್ ತಗುಲಿದೆ, ಯಾರು ಇಲ್ಲದ ಕಾರಣ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ; PGಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ | ಓರ್ವ ಸಾವು ; ಮೂವರಿಗೆ ಗಂಭೀರ ಗಾಯ!



















