ಚಿತ್ರದುರ್ಗ: ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾಗಿ ಎಎಸ್‌ಐ(ASI) ಅಧಿಕಾರಿಯೊಬ್ಬರು ಬೈಕ್‌ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ (50) ಮೃತ ದುರ್ದೈವಿ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ಸಾಗುವಾಗ ಈ ಅಪಘಾತ ಸಂಭವಿಸಿದೆ.
ಬೈಕ್‌ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುವನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನಾ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ ಲಾರಿ ಪಲ್ಟಿ | ಓರ್ವ ವಿದ್ಯಾರ್ಥಿನಿ ಸಾವು ; ಇಬ್ಬರ ಸ್ಥಿತಿ ಗಂಭೀರ!



















