ಬಾಗಲಕೋಟೆ : ಸಾರಿಗೆ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಗಲಕೋಟೆಯ ಮುಧೋಳ ತಾಲೂಕಿನ ಲೋಕಾಪುರ ಬಳಿ ನಡೆದಿದೆ.
ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಜಖಂಗೊಂಡಿದೆ. ಬಸ್ ಚಾಲಕನ ಕಾಲು ತುಂಡಾಗಿದ್ದು, ಪ್ರಯಾಣಿಕರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ‘ನನ್ನ ದೂರನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ | ಅಸಮಾಧಾನ ಹೊರಹಾಕಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ!



















