ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆಯನ್ನು ಅಕ್ರಮವಾಗಿ ಸಂಭ್ರಮಿಸುತ್ತಿದ್ದ ಅಡ್ಡಾದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ.

ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡುತ್ತಿದ್ದರು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪೊಲೀಸರು ಪಾರ್ಟಿಗೆ ಬ್ರೇಕ್ ಹಾಕಿ, ಸ್ಥಳದಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಫಾರ್ಮ್‌ಹೌಸ್ ಮಾಲೀಕ ಮತ್ತು ಪಾರ್ಟಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಹೊಸ ವರ್ಷ ; ಕುಡಿದು ಪೊಲೀಸರಿಗೆ ಅವಾಜ್ ಹಾಕಿದ ಯುವಕ | ಎಣ್ಣೆ ಕಿಕ್‌ನಲ್ಲಿ ರಂಪಾಟ ಮಾಡಿದ ಯುವತಿ!



















