ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೂರು ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೂರು ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ (Income Tax Department Recruitment 2026) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 8
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ incometaxmumbai.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು benqaluru.vos@incometax.qov.in ಗೆ ಮೇಲ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ | ಏನೆಲ್ಲ ಬದಲಾವಣೆ?


















