ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆಯಲ್ಲಿ ಶೀಘ್ರವೇ ಭರ್ಜರಿ ನೇಮಕಾತಿ ನಡೆಯಲಿದೆ. ಹೌದು, ಅಂಚೆ ಇಲಾಖೆಯು ಬರೋಬ್ಬರಿ 30 ಸಾವಿರ ಹುದ್ದೆಗಳ ನೇಮಕಾತಿಗಾಗಿ (India Post Recruitment 2026) ಜನವರಿ 15ರಂದು ಅಧಿಸೂಚನೆ ಹೊರಡಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹಾಗಾಗಿ, ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸಿದ್ಧರಾಗಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ
ಒಟ್ಟು ಹುದ್ದೆ: 30 ಸಾವಿರ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ ಇತ್ಯಾದಿ
ಒಟ್ಟು 30 ಸಾವಿರ ಹುದ್ದೆಗಳಲ್ಲಿ ಪೋಸ್ಟ್ಮಾಸ್ಟರ್, ಸಹಾಯಕ ಪೋಸ್ಟ್ಮಾಸ್ಟರ್ ಮತ್ತು ಡಾಕ್ ಸೇವಕ್ ಹುದ್ದೆಗಳು ಸೇರಿವೆ.. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಮತ್ತು ಆಯ್ಕೆಯು ಮೆರಿಟ್ ಆಧಾರದ ಮೇಲೆ ನಡೆಯುತ್ತದೆ. ಆಸಕ್ತರು 2026 ಜನವರಿ 15 ರಂದು ಅಥವಾ ನಂತರ ಅಧಿಕೃತ ವೆಬ್ಸೈಟ್ indiapostgdsonline.gov.in ನಲ್ಲಿ ಹೆಚ್ಚಿನ ವಿವರಗಳಿಗಾಗಿ ಭೇಟಿ ನೀಡಬಹುದು.
ಗ್ರಾಮೀಣ ಡಾಕ್ ಸೇವಕ್ (GDS), ಬ್ರ್ಯಾಂಚ್ ಪೋಸ್ಟ್ಮಾಸ್ಟರ್ (BPM), ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ಮಾಸ್ಟರ್ (ABPM) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಅನ್ವಯ ನಡೆಯುವುದಿಲ್ಲ. 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಭಾರತೀಯ ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಇದು ಕೇಂದ್ರ ಸರ್ಕಾರಿ ನೌಕರಿಯಾಗಿರುತ್ತದೆ. ಗ್ರಾಮೀಣ ಭಾಗದ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapostgdsonline.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂಪಾಯಿ ಫೆಲೋಶಿಪ್ | ಹೀಗೆ ಅರ್ಜಿ ಸಲ್ಲಿಸಿ



















