ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ 132 ಹುದ್ದೆಗಳ ನೇಮಕಾತಿಗಾಗಿ (Cochin Shipyard Limited Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 132 ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 132
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 12
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಸೀನಿಯರ್ ಶಿಪ್ ಡ್ರಾಪ್ಟ್ಸ್ ಮನ್, ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ವಿಭಾಗದಲ್ಲಿ ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಪದವಿ, ಬಿಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್ ಲೈನ್ ಟೆಸ್ಟ್, ಪ್ರಾಕ್ಟಿಕಲ್ ಟೆಸ್ಟ್ ಹಾಗೂ ಡಿಸ್ಕ್ರಿಪ್ಟಿವ್ ಟೈಮ್ ಆನ್ ಲೈನ್ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cochinshipyard.in ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ಪಿಸಿಬಿ ವಿರುದ್ಧ ಸಿಡಿದೆದ್ದ ಜೇಸನ್ ಗಿಲ್ಲೆಸ್ಪಿ | ಪಾಕಿಸ್ತಾನ ಕೋಚ್ ಹುದ್ದೆ ತೊರೆದ ಹಿಂದಿನ ಕರಾಳ ಸತ್ಯ ಬಹಿರಂಗ



















