ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ (NALCO Recruitment 2026) ಖಾಲಿ ಇರುವ 110 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 110 ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ
ಹುದ್ದೆಗಳ ಹೆಸರು: ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ
ಒಟ್ಟು ಹುದ್ದೆಗಳು: 110
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 22
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿ ಟೆಕ್, ಬಿ.ಇ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 2025ರ ಗೇಟ್ ಪರೀಕ್ಷೆಯ ಅಂಕಗಳು ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು nalcoindia.com ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಹಿಂದೂಸ್ತಾನ್ ಕಾಪರ್ ಸಂಸ್ಥೆಯಲ್ಲಿ 7 ಹುದ್ದೆಗಳು | ಕೂಡಲೇ ಅರ್ಜಿ ಸಲ್ಲಿಸಿ


















