ಉಡುಪಿ | ಟಿಪ್ಪರ್ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಗಾಯಗೊಂಡ ಘಟನೆ ಜ.5ರಂದು ಸಂಜೆ 4.13ರ ಸುಮಾರಿಗೆ ಕುಂದಾಪುರದ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನಲ್ಲಿ ನಡೆದಿದೆ.

ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಾಯಗೊಂಡವರ ಪೈಕಿ ಏಳು ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಟಿಪ್ಪರ್ ಚಾಲಕ ರಾಘವೇಂದ್ರ ತೀವ್ರ ಗಾಯಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.
ಇದನ್ನೂ ಓದಿ : ಬಳ್ಳಾರಿ ಫೈರಿಂಗ್ ಕೇಸ್ ತನಿಖೆ ಚುರುಕು | ಜನಾರ್ದನ ರೆಡ್ಡಿ ಮನೆ ಬಳಿ ಮತ್ತೊಂದು ಬುಲೆಟ್ ಪತ್ತೆ



















