ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದಿರುವಂತಹ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32)ಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.
ದುಷ್ಕರ್ಮಿಗಳು ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಬಸವಂತರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿಸಿಪಿ, ಎಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃಣಾಲ್ ಹೆಬ್ಬಾಳ್ಕರ್ ಕೂಡ ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಈ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್..!



















