ಬೆಂಗಳೂರು | ರಾಜ್ಯ ಚುನಾವಣಾ ಆಯೋಗವು (State Election Commission) ವಿದ್ಯುನ್ಮಾನ ಮತಯಂತ್ರಗಳ (EVM) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ಗಂಡು ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು



















