ಬೆಳಗಾವಿ : ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೆ ದಿನೇ ಹೆಚ್ಚುತ್ತಿದೆ. ಶಾಲೆಯಿಂದ ಮರಳುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಬೆಳಗಾವಿ ನಗರದ ಜೋಶಿ ಮಾಳಾದಲ್ಲಿ ನಡೆದಿದೆ.
ಡಿಸೆಂಬರ್ 30ರಂದು ಘಟನೆ ನಡೆದಿದ್ದು, ಗುಂಪಾಗಿ ಸೇರಿಕೊಂಡ ಬೀದಿ ನಾಯಿಗಳು ಬಾಲಕಿ ಮೇಲೆ ದಾಳಿ ಮಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಸ್ಥಳೀಯರು ಮಹಾನಗರ ಪಾಲಿಕೆ ಅಧಿಕಾರಿಗಳ ಎಡವಟ್ಟಿನಿಂದ ನಾಯಿ ಹಾವಳಿ ಹೆಚ್ಚಾಗುತ್ತಿದೆ ಎಂದು ಆಕ್ರೋಶಿಸುತ್ತಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ಗಂಡು ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು



















